5 ವರ್ಷದ ಒಳಗಿನ ಮಕ್ಕಳಿಗೆ
ಹಾಕಿಸಲು ಮನವಿ
ತುಮಕೂರು- ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ಡಿ. 21 ರಂದು ಪೋಲಿಯೋ ಅಭಿಯಾನ ಹಮ್ಮಿಕೊಂಡಿದ್ದು, 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಬೇಕು ಎಂದು ಐಎಂಎ ಅಧ್ಯಕ್ಷ ಡಾ. ಕೃಷ್ಣಮೂರ್ತಿ ಹಾಗೂ ಕಾರ್ಯದರ್ಶಿ ಡಾ. ನಳಿನಿ ಯಶವಂತ್ ಮನವಿ ಮಾಡಿದ್ದಾರೆ.
ಮಕ್ಕಳ ಆರೋಗ್ಯದ ದೃಷ್ಠಿಯಿಂದ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆ, ಅಂಗನವಾಡಿ, ಖಾಸಗಿ ಕ್ಲಿನಿಕ್‌ಗಳಲ್ಲಿಯೂ ಪೋಲಿಯೋ ಲಸಿಕೆಗಳನ್ನು ಹಾಕಲಾಗುತ್ತದೆ. ಸಾರ್ವಜನಿಕರು 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹಾಕಿಸಿ ಅಂಗವೈಕಲ್ಯದಿಂದ ಮಕ್ಕಳನ್ನು ರಕ್ಷಿಸಿ ಎಂದು ಹೇಳಿದ್ದಾರೆ.

ಅಂಗವೈಕಲ್ಯತೆಯಿಂದ ಮಕ್ಕಳನ್ನು ದೂರ ಮಾಡಲು ಪೋಲಿಯೋ ಸಹಕಾರಿ ಎಂದು ಅವರು ತಿಳಿಸಿದ್ದಾರೆ.
ಯಾವುದೇ ಮಗು ತಪ್ಪಿಸಿಕೊಳ್ಳದಂತೆ ಪೋಷಕರು ಪೋಲಿಯೋ ಹನಿ ಹಾಕಿಸಬೇಕು. ಪೋಲಿಯೋ ಹನಿ ಸುರಕ್ಷಿತ, ಪರಿಣಾಮಕಾರಿ ಮತ್ತು ಜೀವ ಉಳಿಸುವ ಸಾಧನವಾಗಿದೆ. ಇದು ನಮ್ಮ ಮಕ್ಕಳು ಮತ್ತು ಸಮುದಾಯವನ್ನು ಒಟ್ಟಾರೆಯಾಗಿ ರಕ್ಷಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. ನಮ್ಮ ಮಕ್ಕಳ ಭವಿಷ್ಯವನ್ನು ರಕ್ಷಿಸಲು ಮತ್ತು ಭಾರತವನ್ನು ಪೋಲಿಯೋ ಮುಕ್ತವಾಗಿಡಲು ನಾವೆಲ್ಲರೂ ಕೈಜೋಡಿಸೋಣ ಎಂದು ಐಎಂಎ ಜಿಲ್ಲಾ ಘಟಕ ಮನವಿ ಮಾಡಿದೆ. .
