ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಜಿಲ್ಲಾ ಮಟ್ಟದ ಸಿಬ್ಬಂದಿಗಳ ತರಬೇತಿ ಕಾರ್ಯಾಗಾರ
ಶಿರಾ: ಶ್ರೀ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ (SKDRDP) ವತಿಯಿಂದ ತುಮಕೂರು-2 ಜಿಲ್ಲೆಯ ಜಿಲ್ಲಾ ಮಟ್ಟದ ಕಚೇರಿ ಸಿಬ್ಬಂದಿಗಳ ತರಬೇತಿ ಕಾರ್ಯಾಗಾರವನ್ನು ನಗರದ ಕನಿಕಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿತ್ತು.
ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬೆಂಗಳೂರು ಪ್ರಾದೇಶಿಕ ವಿಭಾಗದ ನಿರ್ದೇಶಕರಾದ ಶೀನಪ್ಪ ಅವರು, ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಅಮ್ಮನವರ ಆಶಯದಂತೆ ಸಂಸ್ಥೆಯ ಪ್ರತಿಯೊಬ್ಬ ಸಿಬ್ಬಂದಿಯೂ ತಮಗೆ ವಹಿಸಿದ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕವಾಗಿ ಮತ್ತು ನಿಷ್ಠೆಯಿಂದ ನಿರ್ವಹಿಸಬೇಕು ಎಂದು ಕರೆ ನೀಡಿದರು. ಅಲ್ಲದೆ, ವೃತ್ತಿಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಶಿಸ್ತು ಹಾಗೂ ಸೇವಾ ಮನೋಭಾವದ ಬಗ್ಗೆ ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡುವುದರ ಜೊತೆಗೆ ದೈನಂದಿನ ಕರ್ತವ್ಯಗಳ ಬಗ್ಗೆ ಗಮನಹರಿಸುವಂತೆ ಸಲಹೆ ನೀಡಿದರು.
ತುಮಕೂರು-2 ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಮಾತನಾಡಿ : ಯೋಜನೆಯ ವಿವಿಧ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಕಚೇರಿ ಸಿಬ್ಬಂದಿಗಳ ಪಾತ್ರ ಮಹತ್ವದ್ದಾಗಿದೆ. ದೈನಂದಿನ ಕೆಲಸ ಕಾರ್ಯಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ಬಗ್ಗೆ ಮತ್ತು ಕರ್ತವ್ಯ ನಿರ್ವಹಣೆಯ ವಿಧಾನಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಪ್ರಮುಖರುಗಳಾದ
ಜಿಲ್ಲಾ ಎಂ.ಐ.ಎಸ್ (MIS) ಯೋಜನಾಧಿಕಾರಿಗಳು.
ಜಿಲ್ಲೆಯ ಎಂಟು ತಾಲೂಕುಗಳ ಯೋಜನಾಧಿಕಾರಿಗಳು.
ಜಿಲ್ಲಾ ಮತ್ತು ತಾಲೂಕು ಕಚೇರಿಗಳ ಎಲ್ಲಾ ಸಿಬ್ಬಂದಿ ವರ್ಗದವರಿಗೆ ಈ ಕಾರ್ಯಾಗಾರವು ಹೊಸ ಉತ್ಸಾಹ ತುಂಬುವಲ್ಲಿ ಹಾಗೂ ಯೋಜನೆಯ ಗುರಿಗಳನ್ನು ತಲುಪಲು ಪೂರಕವಾದ ವೇದಿಕೆಯಾಗಿ ನಿರ್ಮಾಣವಾಗಿತ್ತು.ಈ ಸಭೆಯಲ್ಲಿ ಜಿಲ್ಲೆಯ ಎಂಐಎಸ್ ಯೋಜನಾಧಿಕಾರಿಗಳು ಮತ್ತು ಎಂಟು ತಾಲೂಕಿನ ಯೋಜನಾಧಿಕಾರಿಗಳು ಹಾಗೂ ಜಿಲ್ಲಾ ಕಚೇರಿಯ ಸಿಬ್ಬಂದಿಗಳು .ಜಿಲ್ಲೆಯ
ತಾಲೂಕು ಕಚೇರಿಗಳ ಸಿಬ್ಬಂದಿಗಳು ಭಾಗವಹಿಸಿದರು.
