ಸರ್ಕಾರಿ ಎಸ್ ಸಿ ಎಸ್ ಟಿ ನೌಕರರ ಸಮನ್ವಯ ಸಮಿತಿ ಕಚೇರಿ ಜಿಲ್ಲಾ ಉದ್ಘಾಟನೆ : ವಿವಿಧ ಸಾದಕರಿಗೆ ಸನ್ಮಾನ ಎಸ್. ಕೃಷ್ಣಪ್ಪ

Surya Pragathi Editor
1 Min Read

ತುಮಕೂರು: ತುಮಕೂರು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ರಾಜ್ಯ ಸಮನ್ವಯ ಸಮಿತಿ ವತಿಯಿಂದ ಜಿಲ್ಲಾ ಮಟ್ಟದ ಕಚೇರಿ ಉದ್ಘಾಟನೆಯನ್ನು ಟೌನ್ ಹಾಲ್ ವೃತ್ತದಲ್ಲಿರುವ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ
ಹಮ್ಮಿಕೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಸ್. ಕೃಷ್ಣಪ್ಪ ಅವರು ತಿಳಿಸಿದರು.

ಸದರಿ ಕಾರ್ಯಕ್ರಮದಲ್ಲಿ ಮಾನ್ಯ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಎಚ್ ಸಿ ಮಹದೇವಪ್ಪ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರಾದ ಕೆಹೆಚ್ ಮುನಿಯಪ್ಪ ಸೇರಿದಂತೆ ಲೋಕೋಪಯೋಗಿ ಸಚಿವರು ಸಹಕಾರ ಸಚಿವರು ಮತ್ತು ಇತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು ಸದರಿ ಕಾರ್ಯಕ್ರಮದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ವಿಕಿರಣ ರಾಗಿರುವ ವಿದ್ಯಾರ್ಥಿಗಳು ಹಾಗೂ ಸಾಧಕರಿಗೆ ಸನ್ಮಾನಿಸಲು ತೀರ್ಮಾನಿಸಲಾಗಿದ್ದು ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಎಸ್ಸಿ /ಎಸ್ಟಿ ಅಧಿಕಾರಿಗಳು ಮತ್ತು ನೌಕರರುಗಳು ದಲಿತಪರ ಸಂಘ ಸಂಸ್ಥೆಯ ಪದಾಧಿಕಾರಿಗಳು ಹೋರಾಟಗಾರರು ಮುಖಂಡರುಗಳು ಪ್ರಗತಿಪರ ಚಿಂತಕರು ಹಾಜರಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಎಸ್ ಕೃಷ್ಣಪ್ಪ, ರಾಜ್ಯ ಉಪಾಧ್ಯಕ್ಷರು Sc st employees ಯೂನಿಯನ್ ಬೆಂಗಳೂರು. ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this Article
Leave a comment