ಯುವ ಸಂಸತ್ತು: ಪ್ರಜಾಪ್ರಭುತ್ವದ ಬಲವರ್ಧನೆಯಲ್ಲಿ ಪಾತ್ರ ಮಹತ್ವದ್ದು

Surya Pragathi Editor

ಯುವ ಸಂಸತ್ತು: ಪ್ರಜಾಪ್ರಭುತ್ವದ ಬಲವರ್ಧನೆಯಲ್ಲಿ ಪಾತ್ರ ಮಹತ್ವದ್ದು

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ–2026ರ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ “ಯುವ ಸಂಸತ್ತು – ನಮ್ಮ ಮಾತು, ನಮ್ಮ ಭವಿಷ್ಯ” ಕಾರ್ಯಕ್ರಮವನ್ನು ನಗರದ ಜಿಲ್ಲಾ ಗ್ರಂಥಾಲಯ ಸಭಾಂಗಣದಲ್ಲಿ ಆಯೋಜಿಸಲಾಯಿತು.

 

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳ ಸಹಯೋಗದಲ್ಲಿ ಕಾರ್ಯಕ್ರಮ ಜರುಗಿತು. ಯುವಜನರಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂವಿಧಾನದ ಆಶಯಗಳ ಕುರಿತು ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು.

ಕಾರ್ಯಕ್ರಮದಲ್ಲಿ ಮಾನ್ಯ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ ಅವರೊಂದಿಗೆ ಮಾನ್ಯ ಜಿಲ್ಲಾಧಿಕಾರಿಗಳು ಭಾಗವಹಿಸಿ, ವಿದ್ಯಾರ್ಥಿಗಳು ಹಾಗೂ ಯುವಜನರನ್ನು ಉದ್ದೇಶಿಸಿ ಮಾತನಾಡಿದರು. ದೇಶದ ಅಭಿವೃದ್ಧಿ ಮತ್ತು ಪ್ರಜಾಪ್ರಭುತ್ವದ ಬಲವರ್ಧನೆಯಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಲಾಯಿತು.

 

ಯುವಕರು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹಾಗೂ ಜವಾಬ್ದಾರಿಯುತವಾಗಿ ವ್ಯಕ್ತಪಡಿಸುವುದರ ಜೊತೆಗೆ, ಸಂವಿಧಾನದ ಮೌಲ್ಯಗಳನ್ನು ಗೌರವಿಸಿ ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಮಾಜದ ಪ್ರಗತಿಗೆ ಕೊಡುಗೆ ನೀಡುವಂತೆ ಯುವಜನರಿಗೆ ಕರೆ ನೀಡಲಾಯಿತು.

- Advertisement -
Ad imageAd image
- Advertisement -
Ad imageAd image

 

“ಯುವ ಶಕ್ತಿ – ಪ್ರಜಾಪ್ರಭುತ್ವದ ಭವಿಷ್ಯ” ಎಂಬ ಆಶಯದೊಂದಿಗೆ ನಡೆದ ಯುವ ಸಂಸತ್ತಿನಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರು ಸಂಸತ್ ಕಲಾಪದ ಮಾದರಿಯಲ್ಲಿ ಚರ್ಚೆ, ಸಂವಾದ ಮತ್ತು ವಿಚಾರ ವಿನಿಮಯದಲ್ಲಿ ಭಾಗವಹಿಸಿದರು. ಕಾರ್ಯಕ್ರಮವು ಯುವಜನರಲ್ಲಿ ನಾಯಕತ್ವ ಗುಣ, ಸಂವಾದ ಕೌಶಲ್ಯ ಹಾಗೂ ಪ್ರಜಾಪ್ರಭುತ್ವದ ಅರಿವು ಬೆಳೆಸುವಲ್ಲಿ ಮಹತ್ವದ ವೇದಿಕೆಯಾಯಿತು.

Share this Article
Leave a comment